Posts

Showing posts from January, 2011

ಕರ್ನಾಟಕ ಸರ್ಕಾರ ಯಾಕೆ 'ಥಿಂಕ್' ಮಾಡಲ್ಲ?

ಕ ರ್ನಾಟಕದಲ್ಲಿ 'ಪವರ್' ಸಮಸ್ಯೆ ಇದ್ದದ್ದೇ. (ರಾಜಕಾರಣಿಗಳ ಪವರ್ ಅಲ್ಲ !).ಒಂದು ದಿನ ನೀರು ಇದ್ದರೆ ಇನ್ನೊಂದಿನ ಪವರ್ ಇಲ್ಲ. ರಾಜ್ಯಕ್ಕೆ ವಿದ್ಯುತ್ ಸಾಕಾಗ್ತಾ ಇಲ್ಲ ಎಂಬುದು ಮಂತ್ರಿವರ್ಯರ ವರಸೆ. ಬುರುಡೆ ಬಲ್ಬ್ ಬೇಡ ಎಂದು ಸರ್ಕಾರ ಹೇಳಿದ್ದೂ ಆಯ್ತು. ಅದೂ ಬುರುಡೆ ಬಿಟ್ಟದ್ದೋ ಅಂತಾ ಗೊತ್ತಿಲ್ಲ :) ಅಲ್ಲಾ ಮಾರಾಯ್ರೆ ... ಏನೇ ಹೇಳಿ ಬುರುಡೆ ಅಥವಾ ಇನ್ಯಾವುದೇ ಬಲ್ಬ್ ಉರಿಯಲು ವಿದ್ಯುತ್ ಬೇಕಲ್ವಾ? ವಿದ್ಯುತ್ ಇಲ್ಲದಿದ್ದರೆ ಬಲ್ಬ್ ವಿಷ್ಯ ಯಾಕೆ ಬೇಕು? ಕರ್ನಾಟಕದಲ್ಲಿ ವಿದ್ಯುತ್್ನ ಕೊರತೆ ಇದೆ ಎಂಬುದನ್ನು ಒಪ್ಪಿಕೊಳ್ತೀನಿ. ಆದರೆ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಯಾಕೆ ವಿಫಲವಾಗುತ್ತಿದೆ? (ರಾಜ್ಯದ ರಾಜಕೀಯ ಡೊಂಬರಾಟ ವಿದ್ಯುತ್ತಿಗೇ 'ಶಾಕ್್' ನೀಡಿದೆಯೇ ಎಂಬುದು ನನ್ನ ಅನುಮಾನ) ಸದ್ಯ ಈ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಸೌರಶಕ್ತಿಯ ಮೊರೆ ಯಾಕೆ ಹೋಗಬಾರದು? ಇಲ್ಲಿ ಲಭ್ಯವಾಗುವಂತಹ ಸೌರಶಕ್ತಿಯನ್ನು ಸದುಪಯೋಗಿಸಿಕೊಂಡರೆ ರಾಜ್ಯಕ್ಕೆ ಬೇಕಾದಷ್ಟು ವಿದ್ಯುತ್ತನ್ನು ಪಡೆಯಬಹುದು ಎಂಬ ಯೋಚನೆ ಸರ್ಕಾರಕ್ಕೆ ಹೊಳೆದಿಲ್ಲವೇ? ಇಲ್ಲಿರುವ ಕಟ್ಟಡಗಳ ಮೇಲೆ ಸೋಲಾರ್ ಪೇನಲ್ ಹಾಕಿಸಿದ್ರೆ ಕನಿಷ್ಠ ನಿತ್ಯೋಪಯೋಗಿ ವಿದ್ಯುತ್ ಪಡೆಯಬಹುದು ಎಂಬುದರ ಬಗ್ಗೆ ಜನರು ಯಾಕೆ ಯೋಚನೆ ಮಾಡಲ್ಲ? ಇನ್ನು ನೀರಿನ ಸಮಸ್ಯೆ, ಮಳೆ ನೀರು ಅದೆಷ್ಟು ಪೋಲಾಗುತ್ತಿದೆ? ಇಲ್ಲಿ ಯಾರು ಮಳೆ ನೀರು ಸಂಗ್ರಹದತ್ತ