Posts

Showing posts from March, 2012

ಪ್ರಜಾವಾಣಿಗೆ 'ಅನುರಾಗ'ದ ನನ್ನಿ...

ಮಾರ್ಚ್ 9, 2012ರ ಪ್ರಜಾವಾಣಿ ಮೆಟ್ರೋ ಪುರವಣಿಯ 'ಬ್ಲಾಗಿಲನು ತೆರೆದು' ಅಂಕಣದಲ್ಲಿ ನನ್ನ ಬ್ಲಾಗ್ 'ಅನುರಾಗ'ದ ಬಗ್ಗೆ ಬರೆಯಲಾಗಿದೆ. ಇವತ್ತಿನ ದಿನ ಡಬಲ್ ಖುಷಿ ನನಗೆ. ಯಾಕೆ ಗೊತ್ತಾ? ಮಾರ್ಚ್ 9 ನನ್ನ ಅಪ್ಪ ಅಮ್ಮನ 35ನೇ wedding anniversary...ಸುದ್ದಿ ತಿಳಿದು ಅಪ್ಪ ಅಮ್ಮ ಫುಲ್ ಖುಷಿಯಾಗಿದ್ದಾರೆ. ಅವರ ಮುಖದಲ್ಲಿ ಖುಷಿ ಕಂಡು ನನಗೂ ಸಂತೋಷವಾಗಿದೆ. ನಮ್ಮೆಲ್ಲರ ಸಂತಸಕ್ಕೆ ಕಾರಣವಾದ ಪ್ರಜಾವಾಣಿಗೆ 'ಅನುರಾಗ'ದ ಧನ್ಯವಾದಗಳು. ನನ್ನಿ, ರಶ್ಮಿ. ಕಾಸರಗೋಡು.

'ಅವಳ್ಯಾಕೆ' ನಮ್ಮ ರೋಲ್ ಮಾಡೆಲ್ ಆಗ್ಬಾರ್ದು?

Image
ಈ ಜಗತ್ತಿನಲ್ಲಿ ಎಷ್ಟು ರೀತಿಯ ಮಹಿಳೆಯರಿದ್ದಾರೆ? ಎಂಬ ಪ್ರಶ್ನೆಯನ್ನು ನಿಮ್ಮಲ್ಲಿ ನೀವೇ ಕೇಳಿ ನೋಡಿ. ಮೊದಲಿಗೆ ಸುಂದರಿಯಾದ ಮಹಿಳೆಯ ಚಿತ್ರಣ ನಿಮ್ಮ ಮುಂದೆ ಬರುತ್ತದೆ ನಂತರ ನೊಂದ ಮಹಿಳೆ, ಯಶಸ್ವೀ ಮಹಿಳೆ, ದೌರ್ಜನ್ಯಕ್ಕೊಳಗಾದ ಮಹಿಳೆ, ಖಿನ್ನಳಾದ ಮಹಿಳೆ, ಸುಖಿ ಮಹಿಳೆ, ಅಹಂಕಾರಿ ಮಹಿಳೆ, ಮಾನ ಮಾರಿದ ಮಹಿಳೆ, ಮಕ್ಕಳನ್ನೇ ಕೊಂದ ಪಾಪಿ ಮಹಿಳೆ, ಕೈಕೊಟ್ಟ ಮಹಿಳೆ, ಕೈ ಹಿಡಿದ ಮಹಿಳೆ...ಹೀಗೆ ಮಹಿಳೆಯ ಹಲವಾರು 'ರೂಪ'ಗಳು ನಿಮ್ಮ ಕಣ್ಣ ಮುಂದೆ ಸುಳಿಯುತ್ತವೆ. ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಸಂದರ್ಭದಲ್ಲಿ ಚರ್ಚಾ ವಿಷಯಗಳಿಗೊಳಗಾಗುವ ಮಹಿಳೆಯರೆಂದರೆ ಒಂದು ಯಶಸ್ವೀ ಮಹಿಳೆ ಇನ್ನೊಂದು ದೌರ್ಜನ್ಯಕ್ಕೊಳಗಾದ ಮಹಿಳೆ. ಇಂತಹಾ ದಿನಾಚರಣೆಗಳಲ್ಲಿ ಯಶಸ್ವೀ ಮಹಿಳೆಯ ಸಾಧನೆ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯ 'ರೋದನೆ' ಹೆಚ್ಚಿನ ಮಹತ್ವವನ್ನು ಪಡೆದುಕೊಳ್ಳುತ್ತದೆ. ಮಹಿಳಾ ದಿನಾಚರಣೆಯ ಕಾರ್ಯಕ್ರಮಗಳಲ್ಲಿ ನಾವು ಓರ್ವ ಸಾಧಕಿಯ ಸಾಧನೆಗಳನ್ನು ಮೆಚ್ಚಿ ಕರತಾಡನ ಮಾಡಿದರೆ ಇನ್ನೊಂದೆಡೆ ದೌರ್ಜನ್ಯಕ್ಕೊಳಗಾದ ಮಹಿಳೆಯ ಪರ ದನಿಗೂಡಿಸುತ್ತೇವೆ. ಒಬ್ಬಳು ಯಶಸ್ಸಿನ ಮೆಟ್ಟಿಲು ಹತ್ತುತ್ತಿದ್ದರೆ ಇನ್ನೊಬ್ಬಳು ದೌರ್ಜನ್ಯದ ನೋವು ಅನುಭವಿಸುತ್ತಿರುತ್ತಾಳೆ. ಹಾಗೆ ನೋಡಿದರೆ ಯಶಸ್ವೀ ಮಹಿಳೆ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಎರಡು ಗುಂಪುಗಳಿಗೆ ಸೇರಿಸಿ ಪ್ರತ್ಯೇಕಿಸಬಹುದು. ಆದರೆ ಕೆಲವೊಂದು ಮಹಿಳೆಯರ ಮೇಲೆ ಆಗುವ ದೌ