Posts

Showing posts from March, 2008

ಅಲೆಮಾರಿ ಬದುಕು

ಕನಸುಗಳ ಮರಳದಂಡೆಯಲಿ ನೋವ ಹೊತ್ತು ನಡೆವೆವು ಬೆನ್ನಿಗಂಟಿದ ಹೊಟ್ಟೆ, ಅಳುವ ಕೂಸು ಹೊತ್ತು, ಇನ್ನೊಂದು ಮೂಟೆ ರಟ್ಟೆಯಲಿ ವೇದನೆಯ ಗಂಟು ಅಲ್ಲ ಇದು, ಜೀವನದ ಕುಂಟುಗಳಿವು ಪ್ರಕ್ಷುಬ್ಧ ಬದುಕಿನ ಭಗ್ನ ಕನವರಿಕೆ ಅಲೆಮಾರಿಗಳು ನಾವು, ಬದುಕ ಅಲೆ ಸುಳಿಗೆ ಸಿಕ್ಕಿದರೂ ತುಂಡು ರೊಟ್ಟಿ, ಹೊತ್ತು ಕೂಳಿಗಾಗಿ ಸಾಗುವೆವು ಇನ್ನೂ ಮುಂದೆ ಮುಂದೆ ಬರಿಗಾಲ ಪಾದ ಒಡೆದು ರಕ್ತ ಚಿಮ್ಮುತಿರೆ ಬೆವರ ಹನಿ ಮಾಲೆಗಳು ಎದೆ ನಡುವೆ ಹರಿದು ಹೊಕ್ಕಳ ಬಳ್ಳಿಯಲ್ಲಿ ತಂಗಿ ಮತ್ತೂ ಹರಿದಾಗ ಎದೆಗೂಡಿನೊಳು ಚಿಗುರೊಡೆದ ನೆನಪುಗಳ ಒರೆಸಿಟ್ಟ ಮುಗ್ದ ಬೆರಳು ಬೆಳಕು ಸಾಯುವ ಮುನ್ನ ಬೀಡು ಸೇರುವ ತವಕ, ಗೆಜ್ಜೆ ದನಿಗಳ ನಡುವೆ ಸರಿದ ನೆರಳು ಹೃದಯದಲಿ ಅದುಮಿಟ್ಟ ನೋವಿನಾ ಸೆಲೆಯು ಹಾಡಾಗಿ ಉಕ್ಕಿ ಕಪ್ಪು ತುಟಿಗಳಲಿ ಉಸಿರ ಬಿಗಿ ಹಿಡಿದು ಬಿಕ್ಕಿ ಅತ್ತಾಗ, ಬಾಹು ಬಲವಿಲ್ಲದೆ ಬಾಹುಬಲಿಗಳಾದೆವು ಒಂದೆಡೆ ಇನ್ನೊಂದೆಡೆ ಭವಿಷ್ಯ ನುಡಿಯುವ ಮಂಡ ಕಪ್ಪೆಗಳಾಗಿ ಸುಖದ ರೂಪದ ಬಯಕೆ ದುಃಖದಲಿ ದಿನರಾತ್ರಿ ಹದವಾಗಿ ಹರಿಯುತಿರೆ ಗುರಿಯಿರದ ದಾರಿಯೊಳು ತೆವಳುವೆವು ನಿಡುಸುಯ್ವ ಕ್ಷಿತಿಜದಂಚಿಗೆ.

ಸಮಾಜಕ್ಕೆ ಬೆಲೆವೆಣ್ಣುಗಳು ಬೇಕೆ?

ಮಹಿಳೆಯರ ಮೇಲಿನ ದಬ್ಬಾಳಿಕೆ ಶೋಷಣೆ ಇಂದು ನಿನ್ನೆಯ ಕಥೆಯಲ್ಲ. ಮನೆಯಲ್ಲಾದರೂ, ಕಚೇರಿಯಲ್ಲಾದರೂ ಶೋಷಣೆಗೆ ಒಳಪಡುವವಳು ಮಹಿಳೆಯೇ. ಮಾನಸಿಕವಾಗಿ ಅಥವಾ ಶಾರೀರಿಕವಾಗಿ ಶೋಷಣೆ ನಡೆಸುತ್ತಾ ಬಂದಿರುವ ಪುರುಷ ಪ್ರಧಾನ ಸಮಾಜವು ಶೋಷಣೆಗೊಳಗಾದ ಮಹಿಳೆಯನ್ನು ಯಾವ ರೀತಿ ಸ್ವೀಕರಿಸಿದೆ ಎಂಬುದು ಚಿಂತಿಸಬೇಕಾದ ವಿಷಯ. ಯಾವುದೇ ರೀತಿಯಲ್ಲಿಯೂ ಮಹಿಳೆ ಶೋಷಣೆಗೊಳಗಾದರೆ, ಅದರಲ್ಲೂ ದೈಹಿಕ ಶೋಷಣೆಗೊಳಗಾದರೆ ಸಮಾಜವು ಅವಳ ಜೊತೆ ಹೇಗೆ ವರ್ತಿಸುತ್ತದೆ ಎಂಬುದು ಇಲ್ಲಿ ಪ್ರಧಾನವಾದುದು. ಹೆಣ್ಣಿನ ದೈಹಿಕ ಸುಖ ಬಯಸುವ ಪುರುಷ ವರ್ಗ ಯಾವ ಸಂದರ್ಭದಲ್ಲೂ ಬೇಕಾದರೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಬಹುದು. ಹಾಡಹಗಲೇ ಅದೆಷ್ಟೋ ಹೆಣ್ಣು ಮಕ್ಕಳು ಕಾಮದ ಬಲೆಗೆ ಬಿದ್ದು ನರಳುತ್ತಿರುವಾಗ ಇನ್ನು ರಾತ್ರಿ ಕಾಲದ ಬಗ್ಗೆ ಹೇಳುವುದೇನಿದೆ? ಹೆಣ್ಣು ಒಂಟಿ ಎಂದು ಅನಿಸಿದಾಕ್ಷಣ ಕಾಮಣ್ಣರ ಕಣ್ಣಿಗೆ ಗುರಿಯಾಗ ತೊಡಗುವ ಮಹಿಳೆಗೆ ಒಂದೆಡೆಯಾದರೆ, ಪುರುಷ ಜೊತೆಗಿದ್ದರೂ ಕೆಲವೊಮ್ಮೆ ಇಂತಹ ದುರಂತಗಳಿಗೆ ಎಡೆಯಾಗುವ ಪರಿಸ್ಥಿತಿ ಬಂದಿದೆ. ಉದಾಹರಣೆಗೆ ಪ್ರಸ್ತುತ ಹೊಸ ವರ್ಷ ದಿನಾಚರಣೆ ವೇಳೆ ಮುಂಬೈಯಲ್ಲಿ ನಡೆದ ಘಟನೆಯನ್ನೇ ನೆನಪಿಸಿಕೊಳ್ಳಿ. ಹೆಣ್ಣು ಎಷ್ಟು ಸುರಕ್ಷಿತಳು ಎಂದು ಇದರಿಂದ ತಿಳಿಯುತ್ತದೆ. ಬರೀ ಪ್ರಾಯಕ್ಕೆ ಬಂದ ಹೆಣ್ಣು ಮಾತ್ರವಲ್ಲ ದಿನೇ ದಿನೇ ಹೆಣ್ಣು ಹಸುಗೂಸಿನಿಂದ ಹಿಡಿದು ವೃದ್ಧೆಯರ ವರೆಗೆ ಇಂದು ಮಾನಭಂಗಗಳು ನಡೆಯುತ್ತಿದೆ. ಇವುಗಳಿಗೆ ಕಡಿವಾಣ ಹಾಕುವವರು ಯಾರು? ಅತ್

ಆರ್ಥಿಕ ಅಸಮಾನತೆ ನಡುವಿನ ಮಹಿಳೆಯ ಬದುಕು....

ಮಹಿಳಾ ದಿನಾಚರಣೆಯ ನೂರನೇ ವರ್ಷವನ್ನು ಆಚರಿಸುವ ಈ ಸಂದರ್ಭನಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಮಹಿಳಾ ಸಂಘಟನೆಯು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ "ಆರ್ಥಿಕ ಮತ್ತು ಲಿಂಗ ಸಮಾನತೆ"ಎಂಬ ಧ್ಯೇಯವಾಕ್ಯ ಘೋಷಿಸಿದೆ. ಆದರೆ ಶತಮಾನ ಕಳೆದರೂ ಇಂದಿಗೂ ಹಳ್ಳಿಗಳಲ್ಲಿ ಕನಿಷ್ಠ ಕೂಲಿಗಾಗಿ ದಿನವಿಡೀ ದುಡಿಯುವ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿಲ್ಲ ಎನ್ನುವುದು ನಮ್ಮ ಕಣ್ಣ ಮುಂದಿರುವ ಜ್ವಲಂತ ಸಾಕ್ಷಿಯ ನಡುವೆ ಮಹಿಳೆಯರ ವೇತನ ಸಮಾನತೆಯ ಘೋಷಣೆಯೊಂದಿಗಿನ ನೂರನೇ ವರ್ಷಾಚರಣೆ ವಿಪರ್ಯಾಸವಲ್ಲವೇ? ಇತ್ತೀಚೆಗೆ ಅಮೆರಿಕವು ಪ್ರಕಟಿಸಿದ "2007 ಜಾಗತಿಕ ನಗರಾಭಿವೃದ್ಧಿ ಪರಿಷ್ಕರಣಾ ವರದಿ"ಯಲ್ಲಿ ಭಾರತದ ಅತೀ ಹೆಚ್ಚು ಜನರು ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ ಎಂಬ ಸುದ್ದಿಯನ್ನು ನಾವೀಗಾಗಲೇ ಓದಿದ್ದೇವೆ. ಪ್ರಸ್ತುತ ವರದಿ ಪ್ರಕಾರ ಭಾರತದ ಜನಸಂಖ್ಯೆಯ 70 ಪ್ರತಿಶತ ಮಂದಿಯೂ ಹಳ್ಳಿಗಳಲ್ಲಿ ವಾಸವಾಗಿದ್ದಾರೆ ಇನ್ನುಳಿದ 30% ಮಂದಿ ಮಾತ್ರ ನಗರವಾಸಿಗಳಾಗಿದ್ದಾರೆ. ಅಂದರೆ ಇಲ್ಲಿನ ಬಹುತೇಕ ಮಂದಿಯೂ ಕೃಷಿಯನ್ನು ಅವಲಂಬಿಸಿಕೊಂಡಿದ್ದು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಂಡುಕೊಳ್ಳಬೇಕಾದುದು ಅತೀ ಅಗತ್ಯ ಎಂದಾಯಿತು. ಇದರ ಜೊತೆಗೆ ಗ್ರಾಮೀಣ ಜನರಿಗೆ ಉದ್ಯೋಗವನ್ನು ಒದಗಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆಯನ್ನು ಹೊಂದಬಹುದೆಂದು ತಜ್ಞರ ಅಭಿಪ್ರಾಯ. ಅದೇನೇ ಇರಲಿ ಗ್ರಾಮೀಣ ಜನರ ಅಥವಾ ಮಧ್ಯಮ ವರ್ಗದ ಜನರ ಆರ್ಥಿಕತೆಯ