Posts

Showing posts from November, 2009

ಲಾಸ್ಟ್ ಬೆಂಚ್ ಲೀಲೆ...

ಎಲ್ಲಾ ಅಪ್ಪ ಅಮ್ಮಂದಿರಂತೆ ನನ್ನ ಅಪ್ಪ ಅಮ್ಮನಿಗೂ ನಾನು ಫಸ್ಟ್ ಬೆಂಚ್ ಸ್ಟೂಡೆಂಟ್ ಆಗಿರಬೇಕೆಂಬ ಆಸೆ. ಆದಾಗ್ಯೂ, ಕಲಿಕೆಯಲ್ಲಿ ಚುರುಕು (ಆವಾಗ) ಮತ್ತು ನನ್ನ ಎತ್ತರ ಕಡಿಮೆ ಇದ್ದುದರಿಂದ :)ಪ್ಲಸ್ ಟು ವರೆಗೆ ನಾನು ಫಸ್ಟ್ ಬೆಂಚ್್ನಲ್ಲೇ ಕುಳಿತದ್ದು. ಏನಿದ್ದರೂ ಕ್ಲಾಸಿನಲ್ಲಿ ಫಸ್ಟ್ ಬೆಂಚ್ ಸ್ಟೂಡೆಂಟ್ ಅಂತಾ ಹೇಳಿಕೊಳ್ಳುವುದರಲ್ಲಿ ಏನೋ ಒಂದು ರೀತಿ ಹೆಮ್ಮೆ. ಫಸ್ಟ್ ಬೆಂಚ್ ಅಂದರೆ ವಿಐಪಿಗಳ ಸೀಟು, ಅಲ್ಲಿ ಕುಳಿತುಕೊಳ್ಳುವವರೆಲ್ಲಾ ಬುದ್ಧಿವಂತರು, ಲಾಸ್ಟ್ ಬೆಂಚ್್ನಲ್ಲಿ ಕುಳಿತುಕೊಳ್ಳುವವರೆಲ್ಲರೂ ದಡ್ಡರು ಎಂಬುದು ಅಂಬೋಣ. ಅದಕ್ಕಾಗಿಯೇ ವಿದ್ಯಾರ್ಥಿ ದೆಸೆಯಲ್ಲಿ ಫಸ್ಟ್ ಬೆಂಚ್್ನಲ್ಲಿ ಕುಳಿತುಕೊಳ್ಳುವುದೆಂದರೆ ಏನೋ ಸಾಧನೆ ಮಾಡಿದಂತೆ. ಜೊತೆಗೆ ಹೆತ್ತವರಿಗೂ ತಮ್ಮ ಮಕ್ಕಳು ಫಸ್ಟ್ ಬೆಂಚ್್ನಲ್ಲಿ ಕುಳಿತುಕೊಳ್ಳುತ್ತಿದ್ದಾರೆ ಎಂದು ಹೇಳಲು ಹೆಮ್ಮೆಯ ವಿಷಯವೇ. ಫಸ್ಟ್ ಬೆಂಚಿನಲ್ಲಿ ಕುಳಿತುಕೊಳ್ಳುವವರೆಲ್ಲಾ ಜಾಣರು, ಅವರು ನಗುವುದು ಕಡಿಮೆ ಎಂದೆಲ್ಲಾ ಲಾಸ್ಟ್ ಬೆಂಚ್್ನವರು ಕಿರಿಕ್ ಮಾಡುತ್ತಾರೆ. ಅದು ನಿಜವೂ ಹೌದು. ನಾನೇನು ಕಲಿಕೆಯಲ್ಲಿ ಹಿಂದೆ ಬಿದ್ದಿಲ್ಲ, ಆದ್ರೆ ಪ್ಲಸ್ ಟು ವರೆಗೆ ಫಸ್ಟ್ ಬೆಂಚ್್ನಲ್ಲಿ ಕುಳಿತು ಪಾಠ ಕೇಳುವುದು ಬೋರು ಬೋರು ಎನಿಸಿತ್ತು. ಕಾಲೇಜಿಗೆ ಕಾಲಿಟ್ಟ ಮೇಲೆ ಏನೋ ಸಮಾಧಾನ. ಇನ್ಮುಂದೆ ಯಾರು ನೀನು ಈ ಬೆಂಚ್್ನಲ್ಲೇ ಕುಳಿತುಕೊಳ್ಳಬೇಕೆಂದು ಹೇಳಲ್ಲ. ನಮ್ಮದು ಇಂಜಿನಿಯರಿಂಗ್ ಕಾಲೇಜು, 40 ಮಂದಿಯಿರುವ ಒಂದು ಕ್ಲ