Posts

Showing posts from June, 2010

ನಾನೂ ನನ್ನ ಸ್ವಂತ ಕನಸು...

ಶೀರ್ಷಿಕೆ ನೋಡಿದ ಕೂಡಲೇ ಪ್ರಕಾಶ್ ರೈ ಸಿನಿಮಾದ ಬಗ್ಗೆ ಹೇಳುತ್ತಿದ್ದೇನೆ ಅಂತಾ ತಿಳಿದುಕೊಳ್ಳಬೇಡಿ. ಅದಕ್ಕೆ 'ಸ್ವಂತ 'ಎಂಬ ಪದವನ್ನು ತುರುಕಿಸಿದ್ದು. ಆ ಚಿತ್ರ ವೀಕ್ಷಿಸಿದಾಗ ಎಲ್ಲರಂತೆ ನನಗೂ ನನ್ನ ಅಪ್ಪನ ನೆನಪು ತುಂಬಾ ಕಾಡಿತ್ತು. ನನ್ನ ಪಪ್ಪ ಅಂದ್ರೆ ಹಾಗೇನೇ...ತುಂಬಾ ಸ್ವೀಟ್. ಪಪ್ಪನ ಮುದ್ದಿನ ಮಗಳು ನಾನು. ತನ್ನ ತಮ್ಮ ಅಮ್ಮನ ಸೀರೆ ಸೆರಗು ಹಿಡಿದು ಓಡಾಡುತ್ತಿದ್ದರೆ, ಅಪ್ಪನೇ ನನ್ನ ಬೆಸ್ಟ್ ಫ್ರೆಂಡ್. ನನಗೆ ಎರಡು ವರ್ಷವಿರುವಾಗಲೇ ನಾನು ಅಪ್ಪನ ಎದೆಗೆ ಅಂಟಿಕೊಂಡು ನಿದ್ದೆಹೋಗುತ್ತಿದ್ದೆ. ಅಮ್ಮನ ಗೊಡವೆಯೇ ಇಲ್ಲ, ಅವಳಿಗೆ ಅಪ್ಪ ಮಾತ್ರ ಸಾಕಿತ್ತು ಎಂದು ಅಮ್ಮ ಈಗಲೂ ನನ್ನ ಬಾಲ್ಯವನ್ನು ನೆನಪಿಸುತ್ತಾರೆ. ಆ ಬಾಲ್ಯವೇ ಅಂತದ್ದು, ಎಲ್ಲದಕ್ಕೂ ನಂಗೆ ಪಪ್ಪ ಬೇಕು. ಸ್ನಾನ ಮಾಡಿಸುವುದು, ತಿಂಡಿ ತಿನಿಸುವುದು, ಶಾಲೆಗೆ ರೆಡಿ ಮಾಡಿಸುವಾಗ ಜಡೆ ಹಾಕಲು ಮಾತ್ರ ಅಮ್ಮ (ಅದು ಅಪ್ಪನಿಗೆ ಗೊತ್ತಿಲ್ಲದ ಕಾರಣ)ನನ್ನು ಕರೆಯುತ್ತಿದ್ದೆ. ನಾನು ಚಿಕ್ಕವಳಿರುವಾಗ ಅಮ್ಮ ಅಂದ್ರೆ ನಂಗೆ ತುಂಬಾ ಭಯ. ಅಣ್ಣನ ತುಂಟಾಟಿಕೆಗೆ ಬೈಯ್ಯುವ ಅಮ್ಮನನ್ನು ನೋಡಿದರೆ ನನಗೆ ನಡುಕ. ಅಪ್ಪ ನಮ್ಮನ್ಯಾರನ್ನು ಬೈಯ್ಯಲ್ಲ. ತುಂಬಾ ಪ್ರೀತಿಯಿಂದಲೇ ಎಲ್ಲವನ್ನೂ ಹೇಳಿಕೊಡುತ್ತಿದ್ದರು. ಅದು ಮಾಡಬಾರದು ಇದು ಮಾಡಬಾರದು ಎಂದು ಯಾವತ್ತಿಗೂ ಒತ್ತಡ ಹಾಕುತ್ತಿರಲಿಲ್ಲ ಮಾತ್ರವಲ್ಲದೆ ಮಾಡಬಾರದು ಎಂದು ಹೇಳಿದರೆ ಅದ್ಯಾಕೆ ಮಾಡಬಾರದು? ಎಂದು ನಮಗೆ ವಿವರಿಸಿ ಹೇಳುತ್ತಿದ