Posts

Showing posts from February, 2012

ಪ್ರೀತಿ, ಸಿನಿಮಾ ಮತ್ತು ಫೇಸ್ ಬುಕ್

Image
ಶೀ ರ್ಷಿಕೆ ನೋಡಿದ ಕೂಡಲೇ ವಿಷಯ ಏನೂಂತಾ ನಿಮಗೆ ಗೊತ್ತಾಗಿರಬೇಕು ಅಲ್ವಾ? ಹೌದು ಇವತ್ತು ವ್ಯಾಲೆಂಟೈನ್ಸ್ ಡೇ(ಪ್ರೇಮಿಗಳ ದಿನ). ಪಾಶ್ಚಾತ್ಯರಿಂದ ಬಳುವಳಿಯಾಗಿ ಸಿಕ್ಕ ಈ ಆಚರಣೆ ಭಾರತದಲ್ಲಿ ಇಂದು ಗಣರಾಜ್ಯೋತ್ಸವ, ಶಿವರಾತ್ರಿಯಷ್ಟೇ ಪ್ರಾಮುಖ್ಯತೆಯನ್ನು ಪಡೆದಿದೆ ಎಂದರೆ ತಪ್ಪಾಗಲಾರದು. ಪ್ರೇಮಿಗಳ ದಿನ ಎಂದ ಕೂಡಲೇ ಪ್ರೀತಿಸಲು ಪ್ರತ್ಯೇಕ ದಿನ ಬೇಕಾ? ಅದೊಂದಿನ ಪ್ರೀತಿ ಮಾಡಿದರೆ ಸಾಕಾ? ಕೆಂಪು ಗುಲಾಬಿ ಕೊಟ್ಟು ಐ ಲವ್ ಯೂ ಅಂತಾ ಹೇಳಿ ಇಲ್ಲವೇ ದುಬಾರಿ ಗಿಫ್ಟ್, ಕಾರ್ಡ್ ಕೊಟ್ಟು ಪಾರ್ಕ್ ಸಿನಿಮಾ ಸುತ್ತಾಡಿ ವ್ಯಾಲೆಂಟೈನ್ಸ್ ಡೇ ಆಚರಿಸುವ ಪಾಶ್ಚಾತ್ಯರ ಪ್ರೇಮದ ಹುಚ್ಚು ಭಾರತೀಯರಾದ ನಮಗ್ಯಾಕೆ ಬೇಕು? ಎಂಬ ಪ್ರಶ್ನೆ ಪ್ರತೀ ವ್ಯಾಲೆಂಟೈನ್ಸ್ ಡೇ ದಿನದಂದು ಕೇಳಿ ಬರುತ್ತದೆ. ಈ ಬಗ್ಗೆ ಮಾಧ್ಯಮಗಳು ಸಾಕಷ್ಟು ಚರ್ಚೆಗಳನ್ನು ನಡೆಸಿದರೆ, ಕೆಲವೊಂದು ಸಂಘಟನೆಗಳು ವ್ಯಾಲೆಂಟೈನ್ಸ್ ಡೇ ವಿರೋಧಿಸಿ ಎಂಬ ಘೋಷಣೆಗಳನ್ನು ಕೂಗುತ್ತವೆ. ಆದರೂ ಭಾರತದಲ್ಲಿ ವ್ಯಾಲೆಂಟೈನ್ಸ್ ಆಚರಣೆ ಮುಂದುವರಿಯುತ್ತಲೇ ಇದೆ. ಯಾಕೆಂದರೆ ಇಂತಹ ಚರ್ಚೆ, ಪ್ರತಿಭಟನೆಗಳಿಂದಲೇ ವ್ಯಾಲೆಂಟೈನ್ಸ್ ಡೇ ಇನ್ನಷ್ಟು ಪ್ರಚಾರ ಗಿಟ್ಟಿಸಿಕೊಂಡಿವೆ ಎಂದರೆ ತಪ್ಪಾಗಲಾರದು. ಪ್ರತೀವರ್ಷ ಫೆ.14 ಬಂತೆಂದರೆ ಸಾಕು...ಪಾರ್ಕ್, ಸಿನಿಮಾ ಹಾಲ್ ಎಲ್ಲೆಡೆಯೂ ಪ್ರೇಮಿಗಳ ಕಲರವ. ಪ್ರೀತಿಯ ಮೆಸೇಜ್್ಗಳಿಂದ ತುಂಬಿ ತುಳುಕುವ ಐನ್್ಬಾಕ್ಸ್, ಈ ಮೇಲ್, ಗಿಫ್ಟ್... ಬೆಳಗ್ಗಿನಿಂದ ರಾತ್ರಿ ವರೆಗಿನ ಸಮಯ