ಮೊನ್ನೆ ಶಿವಾಜಿನಗರಕ್ಕೆ ಹೋಗುತ್ತಿದ್ದಾಗ ನನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಹುಡುಗಿಯೊಬ್ಬಳು ಫೋನಲ್ಲಿ ಮಾತನಾಡುತ್ತಿರುವುದು ಬೇಡ ಬೇಡವೆಂದರೂ ನನ್ನ ಕಿವಿಗೆ ಬೀಳುತ್ತಿತ್ತು. ಸಾಮಾನ್ಯವಾಗಿ ಬಸ್ನಲ್ಲಿ ಪ್ರಯಾಣಿಸುವಾಗ ಕುಳಿತುಕೊಳ್ಳಲು ಸೀಟು ಸಿಕ್ಕರೆ ಪುಸ್ತಕ ಓದುವುದು ಅಭ್ಯಾಸ. ಅಂದು ಬಸ್ಸಿನಲ್ಲಿ ಜನ ತುಂಬಾ ಇದ್ದರೂ ಪುಣ್ಯಕ್ಕೆ ನನಗೆ ಸೀಟು ಸಿಕ್ಕಿತ್ತು. ಹಿಂದಿನ ಸೀಟಲ್ಲಿ ಕುಳಿತ ನನ್ನಷ್ಟೇ ವಯಸ್ಸಿನ ಹುಡುಗಿಯೊಬ್ಬಳು ವಟ ವಟ ಎಂದು ಫೋನಲ್ಲಿ ಮಾತು ಶುರು ಹಚ್ಚಿಕೊಂಡಿದ್ದಳು. ಇಂಗ್ಲೀಷ್ನಲ್ಲಿ ಆಕೆ ಜೋರಾಗಿ ಮಾತನಾಡುತ್ತಿದ್ದುದರಿಂದಲೇ ನನ್ನ ಕಿವಿ ನೆಟ್ಟಗಾಯಿತು. ವೈ ಯು ಇನ್ಸರ್ಟಿಂಗ್ ಯುವರ್ ನೋಸ್ ಇನ್ ಬಿಟ್ವೀನ್. ಐ ಯೆಸ್ಟರ್ಡೇ ಟೋಲ್ಡ್ ನಾ..ಅಂಡರ್ಸ್ಟಾಂಡ್ ಪಾ..ಹೀಗೇ ಆಕೆಯ ಇಂಗ್ಲಿಷ್ ಸಂಭಾಷಣೆ ಮುಂದುವರಿಯಿತು. ಮಾತು ಮಾತುಗಳೆಡೆಯಲ್ಲಿ ಆಕೆ ನೋಪಾ, ಯೆಸ್ ಪಾ ಅಂತ ಹೇಳುತ್ತಾ ತನ್ನ ಏರುದನಿಯನ್ನು ಸ್ವಲ್ಪ ಸ್ವಲ್ಪವೇ ತಗ್ಗಿಸುತ್ತಿದ್ದಳು. ಒಮ್ಮೆ ಹಿಂತಿರುಗಿ ನೋಡಿದೆ, ಆಕೆ ಫೋನ್ ಸಂಭಾಷಣೆಯಲ್ಲಿ ಮಗ್ನಳಾಗಿದ್ದಾಳೆ. ಪುಸ್ತಕ ಹಿಡಿದುಕೊಂಡು ಕೂತಿದ್ದೆನಾದರೂ ವೈ ಯು ಇನ್ಸರ್ಟಿಂಗ್ ಯುವರ್ ನೋಸ್ ಇನ್ ಬಿಟ್ವೀನ್ ಎಂಬ ವಾಕ್ಯ ನನ್ನ ಕಿವಿಗೆ ಬೇಡ ಬೇಡವೆಂದರೂ ಅಪ್ಪಳಿಸುತ್ತಿತ್ತು. ಆಕೆ ಹೇಳಿದ್ದು, ನೀನ್ಯಾಕೆ ಮಧ್ಯೆ ಮೂಗು ತೂರಿಸುತ್ತೀಯಾ ಎಂಬುದನ್ನೇ ಅಲ್ಲವೇ? ಕನ್ನಡ ಪ್ರತಿಪದವನ್ನೂ ಹಾಗೆಯೇ ಇಂಗ್ಲಿಷ್ಗೆ ಅನುವಾದ...
Comments
- ರಾಧಾಕೃಷ್ಣ ಕಾರೆ
- ರಾಧಾಕೃಷ್ಣ ಕಾರೆ