ಪ್ರಶ್ನೆಯಾಗಿ ಕಾಡುತ್ತಿರುವ ಕರುತ್ತಮ್ಮ...
ಹೌ ದು, ಈ ಕರುತ್ತಮ್ಮ ಕಾಡಿದಷ್ಟು ಇನ್ಯಾರೂ ನನ್ನನ್ನು ಕಾಡಿರಲಿಲ್ಲ. ಬಾಲ್ಯದಿಂದ ಹಿಡಿದು ಇಲ್ಲಿಯವರೆಗೆ ನಾನು ಇಷ್ಟಪಡುವ ಹೆಂಗಸರಲ್ಲಿ ಇವಳೂ ಒಬ್ಬಳು. ನಾನು ಹೀಗೆಹೇಳುತ್ತಿದ್ದರೆ ಆ ಕರುತ್ತಮ್ಮ ಯಾರು ಎಂಬ ಪ್ರಶ್ನೆ ನಿಮ್ಮನ್ನೂ ಕಾಡುತ್ತಿರಬಹುದು ಅಲ್ಲವೇ? ಅವಳು ಮತ್ಯಾರೂ ಅಲ್ಲ ಪ್ರಶಸ್ತಿ ವಿಜೇತ ಹಳೇ ಕಾಲದ ಮಲಯಾಳಂ ಚಿತ್ರ ಚೆಮ್ಮೀನ್್ನ ನಾಯಕಿ. ಚಿತ್ರದಲ್ಲಿ ಕರುತ್ತಮ್ಮನ ಪಾತ್ರ ನಿರ್ವಹಣೆ ಮಾಡಿದ್ದು ನಟಿಶೀಲ. ಮಲಯಾಳಂನಲ್ಲಿ ಚೆಮ್ಮೀನ್ ಅಂದ್ರೆ ಸಿಗಡಿ ಮೀನು. ತಗಳಿ ಶಿವಶಂಕರ ಪಿಳ್ಳೆ ಬರೆದ ಚೆಮ್ಮೀನ್ ಎಂಬ ಕಾದಂಬರಿ ಆಧರಿತ ಚಿತ್ರವಾದ ಚೆಮ್ಮೀನ್ 1965ರಲ್ಲಿ ತೆರೆಕಂಡರೂ ಅದರಯಶಸ್ಸು ಇಂದಿಗೂ ಚಿರನೂತನ. ಅವರ ಕಥೆ, ಹಾಡು, ನಟನೆ ಅಬ್ಬಾ...ಆ ಚಿತ್ರವನ್ನು ನೋಡಿಯೇ ಅನುಭವಿಸಬೇಕು. ಚಿಕ್ಕವರಿರುವಾಗ ಶಾಲೆಯಲ್ಲಿ ಕ್ವಿಜ್್ಗೆ ಚೆಮ್ಮೀನ್ ಕಾದಂಬರಿ ಬರೆದವರು ಯಾರು? ಎಂಬ ಪ್ರಶ್ನೆ ಕಾಮನ್ ಆಗಿತ್ತು. ಮೊದಲಬಾರಿಗೆ ಚೆಮ್ಮೀನ್ ಕಾದಂಬರಿ ಬಗ್ಗೆ ಕುತೂಹಲ ಹುಟ್ಟಿಕೊಂಡದ್ದೇ ಹೀಗೆ. ಅಂತೂ ಕೊನೆಗೂ ಅದೊಂದು ದಿನ ಡಿಡಿ 1 ಚಾನೆಲ್್ನಲ್ಲಿ ಆದಿತ್ಯವಾರ ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ ಚೆಮ್ಮೀನ್ ಚಿತ್ರ ಪ್ರಸಾರವಾಗಿತ್ತು.ನಮ್ಮ ಬ್ಲಾಕ್ ಆ್ಯಂಡ್ ವೈಟ್ ಟೀವಿಯಲ್ಲಿ ಚೆಮ್ಮೀನ್ ಚಿತ್ರ ಮೂಡಿಬರುತ್ತಿದ್ದಂತೆ ಟೀವಿಯಲ್ಲೇ ಗಮನ ಕೇಂದ್ರೀಕರಿಸಿ ಕುಳಿತಿದ್ದೆ. ಚಿತ್ರದುದ್ದಕ್ಕೂ ಕಡಲ ಕಿನಾರೆ...ಮೀನು...ಮೀನುಗಾರರ ಸಂಭಾಷಣೆ..ಅದ್ಭುತ ಸಂಗೀತ...